ಹರಪನಹಳ್ಳಿ:ತಾಲ್ಲೂಕಿನ ಟಿ. ತುಂಬಿಗೆರೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆಸಿದೆ.15 ಮಂದಿ ಅಸ್ವಸ್ಥರಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರನ್ನ ಮಹಾಂತೇಶ್ ( 45) ಹಾಗೂ ಬೋವಿ ಸುರೇಶ್ (35) ಎಂದು ಗುರುತಿಸಲಾಗಿದೆ. 15 ಮಂದಿಗೆ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಕುಡಿಯುವ ನೀರಿನ ಪೂರೈಸುವ ಪೈಪ್ ಒಡೆದು ಕೊಳಚೆ ನೀರು ಸೇರಿದ್ದರಿಂದ ಅವಘಡ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದಲ್ಲದೆ ಹೊಸದಾಗಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಷಣ್ಮುಖಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಹರಪನಹಳ್ಳಿ (Indo Times) ತಾಲ್ಲೂಕಿನ ಟಿ. ತುಂಬಿಗೆರೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆಸಿದೆ.15 ಮಂದಿ ಅಸ್ವಸ್ಥರಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರನ್ನ ಮಹಾಂತೇಶ್ ( 45) ಹಾಗೂ ಬೋವಿ ಸುರೇಶ್ (35) ಎಂದು ಗುರುತಿಸಲಾಗಿದೆ. 15 ಮಂದಿಗೆ ತೀವ್ರ ವಾಂತಿ ಭೇದಿ ಕಾಣಿಸಿಕೊಂಡಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಕುಡಿಯುವ ನೀರಿನ ಪೂರೈಸುವ ಪೈಪ್ ಒಡೆದು ಕೊಳಚೆ ನೀರು ಸೇರಿದ್ದರಿಂದ ಅವಘಡ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದಲ್ಲದೆ ಹೊಸದಾಗಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಪೃಥ್ವಿ ಹಾಗೂ ಜಿಲ್ಲಾ ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಷಣ್ಮುಖಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ