ಹರಿಹರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರದಂದು ದಾವಣಗೆರೆ ಜಿಲ್ಲಾ ಲೋಕಾಯುಕ್ತ ಪೊಲೀಸರು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿದರು ತಾಲೂಕು ಮತ್ತು ಜಿಲ್ಲಾಮಟ್ಟದ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಸಾರ್ವಜನಿಕರಿಗೆ ಓಡಾಡಿಸುವುದು ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನ ಕೇಳುವುದು ಸತಾಯಿಸುವುದು ಮಾಡುತ್ತಿದ್ದಲ್ಲೇ ಹಾಗೂ ಯಾರಾದರೂ ಸರ್ಕಾರಿ ಅಧಿಕಾರಿಗಳು ನಿಗದಿಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದಲ್ಲಿ ದೂರುಗಳನ್ನು ನೀಡಬಹುದಾಗಿದೆ ಎಂದು ಲೋಕಾಯುಕ್ತ ಎಸ್ಪಿ ಎಂಎಸ್ ಕೌಲ ಪೊರೆ ತಿಳಿಸಿದರು ಈ ಸಂದರ್ಭದಲ್ಲಿ ಮೂರು ದೂರುಗಳು ಲಿಖಿತವಾಗಿ ಸಲ್ಲಿಸಲಾಯಿತು ಇನ್ನು ಕೆಲವರು ಮೌಕಿಕವಾಗಿ ವಿವಿಧ ಇಲಾಖೆಗಳಲ್ಲಿ ತಾವು ಅನುಭವಿಸುತ್ತಿರುವ ಸಂಕಷ್ಟವನ್ನು ಹೇಳಿಕೊಂಡರು. ಹೆಚ್ಚಿನದಾಗಿ ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯ್ತಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ವಿವಿಧ ಇಲಾಖೆಗಳ ಕುರಿತು ದೂರುಗಳು ಕೇಳಿ ಬಂದವು ಕೆಲವು ದೂರುಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತಿಳಿಸಿ ಹೇಳಿ ಆ ಕೆಲಸ ಕಾರ್ಯಗಳನ್ನು ಮಾಡಲು ಸೂಚಿಸಲಾಯಿತು.ಈ ಸಂದರ್ಭದಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ಕಲಾವತಿ ಕೆ, ಮಧುಸೂಧನ ಸಿ., ಪ್ರಭು ಸೂರಿನ, ಸರಳ ಪಿ., ತಹಸಿಲ್ದಾರ್ ಗುರುಬಸವರಾಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಪಿ ಸುಮಲತಾ, ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.