ದಾವಣಗೆರೆ:ಉದ್ಯೋಗ ಮೇಳ

Spread the love

ದಾವಣಗೆರೆ ಡಿ.16 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಡಿಸೆಂಬರ್ 20 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕೊಠಡಿ ಸಂಖ್ಯೆ 51, ಡಿ.ಸಿ.ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದ್ದಾರೆ.ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‌ನೊAದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:8105122556, 08192-259446ನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ.ಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *