ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪನವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲವುಲ್ಲಾ ರವರು ಬೆಂಗಳೂರಿನ ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಶಾಮನೂರು ಶಿವಶಂಕರಪ್ಪ ಅವರು ಶತಾಯುಷಿಯಾಗಿ ಇನ್ನಷ್ಟು ಕಾಲ ಸಮಾಜವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಅವರಿಗೆ ಕರುಣಿಸಲಿ ಎಂದು ಆಶಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ. ಯಾಸೀನಪೀರ್ ರಜ್ವಿ. ಬಸವಪಟ್ಟಣ ಭಾರಕತ್. ಖಾಜಾ ಇತರರು ಉಪಸ್ಥಿತರಿದ್ದರು