ದಾವಣಗೆರೆ: ನಗರದ ಬೇತೂರು ರಸ್ತೆಯ ಸಮೀಪ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಾಟೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಸೇರಿದಂತೆ ಒಟ್ಟು 48 ಮಂದಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
14 ಹಿಂದೂ ಕಾರ್ಯಕರ್ತರು ಹಾಗೂ ಮುಸ್ಲಿಂ ಸಮಾಜದ 34 ಮಂದಿಗೆ ಜಾಮೀನು ಮಂಜೂರಾಗಿದ್ದು, ಎಲ್ಲರೂ ಹೊರ ಬಂದಿದ್ದಾರೆ. ಈ ಪೈಕಿ ಓರ್ವ ಹಿಂದೂ ಕಾರ್ಯಕರ್ತನ ಜಾಮೀನು ದಾಖಲಾತಿಗಳಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಜಾಮೀನು ಮಂಜೂರಾಗಿಲ್ಲ ಎಂದು ತಿಳಿದು ಬಂದಿದೆ.