ಹರಿಹರ:ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಪುಸ್ತಕ ಪ್ರದರ್ಶನ ಹಾಗೂ ಸದಸ್ಯತ್ವ ಆಂದೋಲನ.

Spread the love

ಹರಿಹರ : ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯದ ಓದುಗರ ಸಂಖ್ಯೆ ಹೆಚ್ಚಿಸಲು ಹಲವಾರು ಕಾರ್ಯಕ್ರಮಗಳನ್ನು ಇಲಾಖೆ ಆಯೋಜಿಸ ಲಾಗುತ್ತಿದೆ ಎಂದು ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಹೇಳಿದರು. ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಹರಿಹರ ಶಾಖೆಯಲ್ಲಿ ಗ್ರಂಥಾಲಯ ಇಲಾಖೆ ಮತ್ತು ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಆಚರಣೆ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನ, ಸದಸ್ಯತ್ವ ಅಭಿಯಾನ ಮತ್ತು ವಿವಿಧ ಶಾಲಾ ಕಾಲೇಜಿನ ಸ್ಪರ್ಧೆ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಗ್ರಂಥಾಲಯಕ್ಕೆ ಓದುಗರನ್ನು ಸೆಳೆಯಲು ಸದಸ್ಯತ್ವ ಅಭಿಯಾನ,ವಿಶೇಷ ಪುಸ್ತಕಗಳ ಸಂಗ್ರಹ ಮುಂತಾದ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುತ್ತಿದೆ. ಗ್ರಂಥಾಲಯ ಇಲಾಖೆಯ ಜಿಲ್ಲಾ ವ್ಯಾಪ್ತಿಯಲ್ಲಿ ಹರಿಹರ ಜಗಳೂರು ಚನ್ನಗಿರಿ ಹೊನ್ನಾಳಿ ನಾಲ್ಕು ಶಾಖೆಗಳು, ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಒಟ್ಟು ಒಂಬತ್ತು ಶಾಖಾ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲ ಕೇಂದ್ರಗಳಲ್ಲಿ 2024-25ರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ವನ್ನು ವಿವಿಧ ಕಾರ್ಯಕ್ರಮ ಗಳನ್ನು ಆಯೋಜಿಸಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ನಾ 14 ರಿಂದ 20 ರವರಿಗೆ ಪುಸ್ತಕ ಪ್ರದರ್ಶನ ಸದಸ್ಯತ್ವ ಆಂದೋಲನ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿ ಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗು ತ್ತಿದೆ. ವಿಶೇಷವಾಗಿ ಹರಿಹರ ಶಾಖೆಯಲ್ಲಿ ಶನಿವಾರ ಬಾಪೂಜಿ ಶಾಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆಗಳ ಹಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ಓದುಗರಿಗೆ ಓದುವ ಹವ್ಯಾಸವನ್ನು ಬೆಳೆಸುವಂತೆ ಪ್ರೇರೇಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಓದುಗರನ್ನು ಗ್ರಂಥಾಲಯಗಳತ್ತ ಸೆಳೆಯುವ ಪ್ರಯತ್ನವನ್ನು ಇಲಾಖೆ ಮಾಡುತ್ತಿದೆ. ಓದುವ ಹವ್ಯಾಸದ ಜೊತೆಯಲ್ಲಿಯೇ ಕೌಶಲ್ಯಾಭಿವೃದ್ದಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ ಎಂದು ಹೇಳಿದರು. ಈ ಬಾರಿಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಜಿಲ್ಲೆಯ ಲ್ಲಿನ ಎಲ್ಲಾ ತಾಲೂಕಿನ ಶಾಖಾ ಗ್ರಂಥಾಲಯಗಳಲ್ಲಿ ಪ್ರತ್ಯೇಕವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು ಎಲ್ಲಾ ಶಾಖೆ ಗಳಲ್ಲಿ ಓದುದರಿಂದ ಹಾಗೂ ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು ಇದು ನಮ್ಮ ಮುಂದಿನ ಕಾರ್ಯಕ್ರಮಗಳಿಗೆ ಸ್ಪೂರ್ತಿ ತಂದಿರುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಗರ ಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಮಾತನಾಡಿ ಹರಿಹರದ ಗ್ರಂಥಾಲಯವು ತುಂಬಾ ವಿಶೇಷವಾಗಿ ಹಾಗು ಅತ್ಯಾಧುನಿಕ ವಾಗಿದ್ದು ಇದರ ಬಗ್ಗೆ ನನಗೆ ತಿಳಿದೇ ಇರಲಿಲ್ಲ. ಆದಾಗ್ಯೂ ಇದೇ ರೀತಿ ಮುಂದುವರಿಯಲಿ.ಯಾವುದೇ ಸಹಕಾರ ಬೇಕಾಗಿದ್ದಲ್ಲಿ ನನ್ನ ಅಧ್ಯಕ್ಷೀಯ ಅವಧಿಯಲ್ಲಿ ಸಂಪೂರ್ಣ ಸಹಕಾರವನ್ನು ನಗರಸಭೆ ಯಿಂದ ಹಾಗೂ ನನ್ನ ವೈಯಕ್ತಿಕವಾಗಿ ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯಗಳಿಗೆ ಸರ್ಕಾರವು ಹೆಚ್ಚಿನ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದ್ದು ಇಂತಹ ಸೌಲಭ್ಯಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡಿಕೊಳ್ಳುವುದರ ಮೂಲಕ ತಮ್ಮ ವೈಯಕ್ತಿಕ ಹಾಗೂ ಸಾರ್ವತ್ರಿಕ ಗ್ರಹಚನೆಯನ್ನು ಬೆಳೆಸಿಕೊಳ್ಳಬೇಕು ಮುಖ್ಯ ವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. ಅತಿಥಿಯಾಗಿ ಆಗಮಿಸಿದ್ದ ತಾಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್ ಮಾತನಾಡಿ ಕನ್ನಡ ನಾಡು ಸಾಹಿತ್ಯಕ್ಕೆ ಹೆಸರಾಗಿದ್ದು ನಮ್ಮ ನಾಡಿನ 8 ಜನರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಸಮಗ್ರ ಸಾಹಿತ್ಯಕ್ಕೆ ನಮ್ಮ ರಾಜ್ಯದಲ್ಲಿ ವಿಫಲ ಅವಕಾಶಗಳಿದ್ದು ಕನ್ನಡ ಪುಸ್ತಕ ಮತ್ತು ಪತ್ರಿಕೆಗಳನ್ನು ಓದುವ ಮೂಲಕ ಸಾರ್ವಜನಿಕರು ,ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಹರಿಹರ ಶಾಖೆಯ ಗ್ರಂಥಾಧಿಕಾರಿಗಳು ಉತ್ತಮವಾದ ಕಾರ್ಯಕ್ರಮ ಒಂದನ್ನು ನಡೆಸಿದ್ದು ಇದು ಎಲ್ಲರ ಮೆಚ್ಚುಗೆ ಪಾತ್ರ ವಾಗಲಿದೆ ಸದಸ್ಯತ್ವ ಅಭಿಯಾನ ಶಾಲಾ-ಕಾಲೇಜು ವಿದ್ಯಾರ್ಥಿ ಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ಓದುಗರಿಗೆ ಪ್ರಭಾವ ಬೀರುವ ಕೆಲಸ ಮಾಡಿದ್ದೀರಿ ಗ್ರಂಥಾಲಯಕ್ಕೆ ನನ್ನಿಂದ ಯಾವುದೇ ರೀತಿಯ ತನು ಮನ,ಧನ ಸಹಾಯ ಬೇಕಾಗಿದ್ದಲ್ಲಿ ನಾನು ನೀಡಲು ಸಿದ್ದನಿರುವುದಾಗಿ ಭರವಸೆ ಇತ್ತರು. ಗ್ರಂಥಾಲಯ ಸಪ್ತಹದಾಂಗವಾಗಿ ವಿಶೇಷ ಉಪನ್ಯಾಸದಲ್ಲಿ ಡಾ.ಫ್ರಾನ್ಸಿಸ್ ಕ್ಷೇವಿಯರ್ ಮಾತನಾಡಿ ಗ್ರಂಥಾಲಯಗಳ ಹುಟ್ಟು ಹಾಗೂ ವಿಶೇಷ ಮತ್ತು ಗ್ರಂಥಾಲಯ ಸ್ಥಾಪಕರ ಬಗ್ಗೆ ವಿಶೇಷ ಮಾಹಿತಿಯನ್ನು ನೀಡಿ ಪ್ರತಿ ವರ್ಷ ನವೆಂಬರ್ 14 ರಿಂದ 20 ರವರೆಗೆ ಗ್ರಂಥಾಲಯ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ. ವಿಶೇಷವಾಗಿ ಈ ವರ್ಷ ಸದಸ್ಯತ್ವ ಅಭಿಯಾನ ಜೊತೆಯಲ್ಲಿ ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಗಾಗಿ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ ದೇಶಭಕ್ತಿ ಗೀತೆಗಳು ಸ್ಪರ್ಧೆ ಮತ್ತು ಕನ್ನಡ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಇದೊಂದು ಹೊಸ ಮಾದರಿಯ ಪ್ರಯೋಗವಾಗಿದ್ದು ಮುಂಬರುವ ದಿನಗಳಲ್ಲಿ ಇದೇ ರೀತಿ ಮುಂದುವರೆಯಲಿ ಎಂದು ಆಶಯ ವ್ಯಕ್ತಪಡಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿವಿಧ ಶಾಲಾ ವಿದ್ಯಾರ್ಥಿ ಗಳಿಗೆ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್ ತಿಪ್ಪೇಸ್ವಾಮಿಯವರ ಅಮೃತ ಹಸ್ತದಿಂದ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್.ರಂಗನಾಥ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜೊತೆಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನೂ ಸಹ ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಹರಿಹರ ಗ್ರಂಥಾಲಯ ಸಹಾಯಕ ರವಿಕುಮಾರ್,ಜಿಲ್ಲಾ ಗ್ರಂಥಾಲಯದ ಮಂಜುನಾಥ ಬಗರಿ, ಕೆ.ಎಚ್. ಹರೀಶ್, ಬಿ.ಇ.ಮಹಾಸ್ವಾಮಿ,ಗೋಪಾಲಕೃಷ್ಣ,ರಮೇಶ, ಸುರೇಶ್, ಅರುಂದತಿ ಸಂಜಯ್ ಪಿ ಸೇರಿದಂತೆ ಹಲವಾರು ಓದುಗರು ಸಾರ್ವಜನಿಕರು ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರುಗಳು ಯಶಸ್ವಿಯಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *