ದಾವಣಗೆರೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ

Spread the love

ದಾವಣಗೆರೆ : ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ತೋಳಹುಣಿಸೆ ರೈಲ್ವೆ ಮೇಲ್ಸೇತುವೆ ಮೇಲೆ ಶನಿವಾರ ನಡೆದಿದೆ.ತಾಲೂಕಿನ ಬುಳ್ಳಾಪುರ ಗ್ರಾಮದ ಪ್ರದೀಪ್.(20) ಮೃತಪಟ್ಟ ಬೈಕ್ ಸವಾರ.ಶನಿವಾರ ಬೆಳಗ್ಗೆ ಬುಳ್ಳಾಪುರ ಗ್ರಾಮದಿಂದ ಬೈಕ್‌ನಲ್ಲಿ ದಾವಣಗೆರೆಗೆ ಬರುವ ವೇಳೆ ಸ್ಕೂಲ್ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ: ಈ ಘಟನೆ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ರೈಲ್ವೆ ಮೇಲ್ಸೇತುವೆ ಪರಿಶೀಲನೆ ನಡೆಸಿದರು.ರೈಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ಸಾಕಷ್ಟು ಸಾವು-ನೋವು ಸಂಭವಿಸುತ್ತಿವೆ. ಮೇಲ್ಸೇತುವೆ ಮೇಲೆ ಗುಂಡಿಗಳು ಬಿದ್ದಿದ್ದು, ಇದರಿಂದ ಬೈಕ್ ಸವಾರರು, ವಾಹನಗಳ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಮೇಲ್ಸೇತುವೆ ದುರಸ್ತಿಗೊಳಿಸಬೇಕೆಂದು ಅಧಿಕಾರಿಗಳನ್ನು ಸಂಪರ್ಕಿಸಿ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *