ದಾವಣಗೆರೆ:ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Spread the love

ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.ಹೊನ್ನಾಳಿ ತಾಲೂಕಿನ ದೊಡ್ಡರಹಳ್ಳಿ ಗ್ರಾಮದ ಶಿವು (21) ಶಿಕ್ಷೆಗೊಳಗಾದ ಆರೋಪಿ.2021ರ ಜುಲೈ 8 ರಂದು ಬಲವಂತವಾಗಿ ಆರೋಪಿ ಎ.ಕೆ.ಶಿವು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಪೋಷಕರು ಜುಲೈ 12ರಂದು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.ತನಿಖಾಧಿಕಾರಿ ಟಿ.ವಿ.ದೇವರಾಜ್, ತನಿಖೆ ನಡೆಸಿದಾಗ ಆರೋಪಿ ಎಂಟು ತಿಂಗಳಿಂದ ನಿನ್ನನ್ನು ಪ್ರೀತಿಸುತ್ತೇನೆ. ನಿನ್ನನ್ನು ಮದುವೆಯಾಗುವುದಾಗಿ ಅಪಹರಿಸಿ ಶಿವಮೊಗ್ಗ ಜಿಲ್ಲೆ ಮತ್ತು ತಾಲೂಕಿನ ಚಿಕ್ಕದಾನವಂದಿ ಗ್ರಾಮಕ್ಕೆ ಕರೆದುಕೊಂಡು ಹೋಗಿ ಭೀಮೋಜಿರಾವ್ ತೋಟದ ಮನೆಯಲ್ಲಿ ಅಪ್ರಾಪ್ತ ಎಂದು ಗೊತ್ತಿದ್ದರೂ ಅವರ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ ಎಂದು ತಿಳಿದ್ದಿದ್ದರಿಂದ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾಧ ಶ್ರೀರಾಮ ನಾರಾಯಣ ಹೆಗಡೆ ಅವರು ಮಂಗಳವಾರ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ, 35 ಸಾವಿರ ದಂಡ ವಿಧಿಸಿ, ದಂಡ ಮತ್ತು ಸರ್ಕಾರದಿಂದ 4 ಲಕ್ಷ ರೂ. ಪರಿಹಾರವನ್ನು ಸಂತ್ರಸ್ತೆಗೆ ನೀಡುವಂತೆ ಆದೇಶ ನೀಡಿದ್ದಾರೆ. ಪಿರ್ಯಾದಿ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *