ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆ

Spread the love

ದಾವಣಗೆರೆ,ಸೆ.30 (Davanagere ) ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರನ್ನು ಆಯ್ಕೆ ಮಾಡಲಾಗಿದೆ.

ವಿಜೇತರಿಗೆ ಅಕ್ಟೋಬರ್ 2 ರಂದು ಬೆಳಗ್ಗೆ 9 ಕ್ಕೆ ರಾಮನಗರದಲ್ಲಿನ ಗಾಂಧಿ ಭವನದಲ್ಲಿ ನಡೆಯುವ ಗಾಂಧಿ ಜಯಂತಿಯಂದು ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಇಂದಿನ ಯುವ ಪೀಳಿಗೆಯಲ್ಲಿ ಗಾಂಧಿ ವಿಚಾರಧಾರೆಗಳು ಹಾಗೂ ಚಿಂತನೆಗಳನ್ನು ಬೆಳೆಸುವುದು ಪ್ರಬಂಧ ಸ್ಪರ್ಧೆಯ ಉದ್ದೇಶವಾಗಿದ್ದು ವಿಜೇತರಿಗೆ ನಗದು ಬಹುಮಾನವಾಗಿ ಪ್ರಥಮ ರೂ.3000, ದ್ವಿತೀಯ ರೂ.2000 ಹಾಗೂ ತೃತೀಯ ರೂ.1000 ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ.

Leave a Reply

Your email address will not be published. Required fields are marked *