ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ . ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ

Spread the love

ರಾಜ್ಯ ಸರಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು ಒಂದು, ಎರಡು ಮತ್ತು ಮೂರನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗಿದೆ ಎಂದು ತಿಳಿಸಿದಾರೆ.ಪ್ರತಿ ಮೆಟ್ರಿಕ್ ಟನ್ ಮರಳಿನ ಮಾರಾಟ ಬೆಲೆಯನ್ನು 300 ರೂ.ಗಳನ್ನು ನಿಗದಿಪಡಿಸಲಾಗಿದೆ ಮತ್ತು ಸದರಿ ವ್ಯವಸ್ಥೆಯು ಪ್ರಸಕ್ತ ಜಾರಿಯಲ್ಲಿದೆ. ನಾಲ್ಕು ಐದು ಮತ್ತು ಉನ್ನತ ಶ್ರೇಣಿಗಳ ಹಳ್ಳ ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರಕಾರದಿಂದ ಅಧಿಸೂಚಿತ ಸರಕಾರಿ ಸ್ವಾಮ್ಯದ ಸಂಸ್ಥೆಗಳು/ಸರಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸಾರ್ವಜನಿಕ/ಖಾಸಗಿ ಸಂಸ್ಥೆಗಳಿಗೆ ಟೆಂಡ‌ರ್ ಮೂಲಕ ಮರಳು ಬ್ಲಾಕ್‌ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ.

Leave a Reply

Your email address will not be published. Required fields are marked *