05/09/2025 ರ ಶುಕ್ರವಾರ ನಡೆದ ಜಶ್ನೇ ಮಿಲಾದ್-ಉನ್-ನಬೀ ಶಾಂತಿಯುತ ಆಚರಣೆಗೆ ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಅಭಿನಂದನೆದಾವಣಗೆರೆ: ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಅಯೂಬ್ ಪೈಲ್ವಾನ್ ಅವರು, ಈಚೆಗೆ ದಾವಣಗೆರೆಯಲ್ಲಿ ಜರುಗಿದ ಜಶ್ನೇ ಮಿಲಾದ್-ಉನ್-ನಬೀ ಹಬ್ಬದ ಯಶಸ್ವಿ ಮತ್ತು ಶಾಂತಿಯುತ ಆಚರಣೆಗೆ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ನಗರದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಲು ಶ್ರಮಿಸಿದ ಗಣ್ಯರನ್ನು ಈ ಸಂದರ್ಭದಲ್ಲಿ ಅವರು ಸ್ಮರಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ .ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸಿದ ಜಿಲ್ಲಾಡಳಿತ ಮತ್ತು ಜಿಲ್ಲಾ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರ ಪ್ರಯತ್ನಗಳನ್ನು ಅಯೂಬ್ ಪೈಲ್ವಾನ್ ಅವರು ವಿಶೇಷವಾಗಿ ಹೊಗಳಿದ್ದಾರೆ. ಹಬ್ಬದ ಸುಗಮ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ಸಹಕಾರಕ್ಕೂ ಅವರು ಧನ್ಯವಾದಗಳನ್ನು ಸಲ್ಲಿಸಿದರು.ಮಿಲಾದ್ ಕಮಿಟಿ, ತಂಜೀಮ್ ಉಲ್ಮ ಅಹಲೇ ಸುನ್ನತ್, ಮತ್ತು ಮುಸ್ಲಿಂ ಸಮಾಜದ ಯುವಕರು ಹಾಗೂ ಹಿರಿಯ ಮುಖಂಡರು ತೋರಿದ ಸಹಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಹಬ್ಬದ ಯಶಸ್ಸಿನಲ್ಲಿ ಎಲ್ಲ ಸಮುದಾಯಗಳ ಜನರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಈ ಸಾಮರಸ್ಯದ ಆಚರಣೆಯು ದಾವಣಗೆರೆಯ ಜನರ ನಡುವಿನ ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಮತ್ತಷ್ಟು ಬಲಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿ, ಈ ಸಹಕಾರ ಮುಂದೆಯೂ ಹೀಗೆ ಮುಂದುವರೆಯಲಿ ಎಂದು ಅವರು ಆಶಿಸಿದರು.